ದೇಶದಲ್ಲೇನಾದ್ರೂ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಸಾಲ ಮನ್ನಾ ಮಾಡ್ತೀನಿ : ರಾಹುಲ್‌ ಗಾಂಧಿ

ಕಲಬುರ್ಗಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ  ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿಯ ಕಾಳಗಿಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಅವರು, ನುಡಿದಂತೆ ನಡೆಯಬೇಕು ಎನ್ನುವ ಬಸವಣ್ಣನವರ ತತ್ವ ನಾವು ಪಾಲನೆ ಮಾಡುತ್ತಿದ್ದೇವೆ. ಆದರೆ ಈ ತತ್ವ ಪ್ರಧಾನಿ ನರೇಂದ್ರ ಮೋದಿಗೆ ಅರ್ಥವಾಗಿಲ್ಲ. ಬದಲಾಗಿ
ಆರ್ ಎಸ್ ಎಸ್ ನೀತಿಗಳನ್ನು ರಾಜ್ಯದ ಮೇಲೆ ಹೇರುವ ಪ್ರಯತ್ನ ಮಾಡ್ತಿದ್ದಾರೆ. ದಲಿತ ಮತ್ತು ಆದಿವಾಸಿಗಳ ಪರವಾಗಿ ಕೇಂದ್ರ ಸರಕಾರ ಕೆಲಸ ಮಾಡುತ್ತಿಲ್ಲ. ಆದರೆ ಕೇಂದ್ರ ಸರಕಾರಕ್ಕಿಂತ ಕರ್ನಾಟಕ ರಾಜ್ಯ ಸರಕಾರವೇ ಹೆಚ್ಚಿನ ಹಣ ದಲಿತ ಮತ್ತು ಆದಿವಾಸಿಗಳಿಗೆ ಖರ್ಚು ಮಾಡುತ್ತಿದೆ ಎಂದಿದ್ದಾರೆ.

ದೇಶದಲ್ಲಿ ನೋಟ್ ಬ್ಯಾನ್ ಮಾಡಿ ಜನ ಸಾಕಷ್ಟು ತೊಂದರೆ ಅನುಭವಿಸವಂತಾಯ್ತು .ಪ್ರತಿಯೊಬ್ಬರ ಅಕೌಂಟ್ ಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು, ಆದರೆ ನೈಯಾಪೈಸೆ ಹಾಕಿಲ್ಲ. ಬ್ಯಾಂಕ್ ನಲ್ಲಿ ಇದ್ದ ಹಣವನ್ನು ತೆಗೆದುಕೊಳ್ಳುವಂತ ಪರಿಸ್ಥಿತಿ ಇಲ್ಲ . ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಎಸ್ ವೈ ಅವರನ್ನು ಸಿಎಂ ಕ್ಯಾಂಡಿಡೇಟ್ ಮಾಡಿರುವ ಮೋದಿಗೆ ನಾಚಿಕೆಯಾಗಬೇಕು ಎಂದಿದ್ದಾರೆ.

 

ರೈತರ ಸಾಲ ಮನ್ನಾ ಮಾಡದ ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ.  ಇದು ರೈತರಿಗೆ ಮಾಡಿದ ಮೋಸ . ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ 8 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. ಕರ್ನಾಟಕದ ರೈತರ, ಬಡವರ, ಹಿಂದುಳಿದವರಿಗೆ ಮೋದಿ ನೈಯಾಪೈಸೆ ಹಣ ನೀಡಿಲ್ಲ. ದೇಶದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ್ರೆ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com