ಕೊನೆಗೂ ಮಹದಾಯಿ ಬಗ್ಗೆ ಮೌನ ಮುರಿದ ಮೋದಿ : ಸಮಸ್ಯೆ ಬಗೆಹರಿಸಲು ಬದ್ದ ಎಂದ ಪ್ರಧಾನಿ

ಗದಗ : ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೊನೆಗೂ ಪ್ರಧಾನಿ ಮೋದಿ ಮಹದಾಯಿ ವಿವಾರವಾಗಿ ಮೌನ ಮುರಿದಿದ್ದಾರೆ. ನಮ್ಮ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದ್ದೇ ಆದರೆ ಮಹದಾಯಿ ವಿಚಾರವನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

ಗದಗದ ತೋಂಟದಾರ್ಯ ಎಂಜಿನಿಯರಿಂಗ್‌ ಕಾಲೇಜು ಪಕ್ಕದ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು. ಜನರ ಕಣ್ಣಿಗೆ ಮಣ್ಣೆರೆಚುವಂತೆ ದೊಡ್ಡ ಕೆಲಸ ಮಾಡಿ ಸುಮ್ಮನೆ ಕೂತು ಬಿಡುತ್ತಾರೆ. ಆದರೆ ನಾವು ಹಾಗಲ್ಲ. ಜನರ ಪ್ರತಿಯೊಂದು ಕಷ್ಟವನ್ನೂ ಅರಿತು ಕೆಲಸ ಮಾಡುತ್ತೇವೆ ಎಂದಿದ್ದಾರೆ.

2007 ರಲ್ಲಿ ಗೋವಾ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕರ್ನಾಟಕಕ್ಕೆ  ಒಂದು ಹನಿ ಮಹದಾಯಿ ನೀರನ್ನು ಕೊಡುವುದಿಲ್ಲ ಎಂದಿದ್ದರು. ಗೋವಾದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದ್ದು, ಕರ್ನಾಟಕದಲ್ಲಿ ಬಂದು ಸಮಸ್ಯೆ ಸೃಷ್ಟಿ ಮಾಡಿದ್ದಾರೆ. ಮಹದಾಯಿ ಸಮಸ್ಯೆಯನ್ನ ಮುಂದೆ ಹಾಕುವ ಪ್ರವೃತ್ತಿ ನಮ್ಮದಲ್ಲ. ನೀರು ಪ್ರತಿಯೊಬ್ಬರ ಹಕ್ಕು, ಮಹದಾಯಿ ಸಮಸ್ಯೆ ಬಗೆಹರಿಸುವ ಸಂಕಲ್ಪ ಮಾಡುವುದಾಗಿ ಹೇಳಿದ್ದಾರೆ.

ಅಲ್ಲದೆ ಈಗಾಗಲೆ ಮಹದಾಯಿ ವಿಚಾರವಾಗಿ ರೈತರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್‌ ಕಾರಣ. ಆದರೆ ಇನ್ನುಮುಂದೆ ಹೀಗಾಗಲು ಬಿಡುವುದಿಲ್ಲ. ಮುಂದಿನ ಪೀಳಿಗೆ ಕಷ್ಟಪಡಲು ಬಿಡುವುದಿಲ್ಲ. ನೀರಿನ ಮೇಲೆ ಎಲ್ಲರಿಗೂ ಹಕ್ಕಿದೆ. ಅದಕ್ಕೊಂದು ಪರಿಹಾರ ಕಂಡುಹಿಡಿಯುತ್ತೇವೆ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com