ಬಿಜೆಪಿ ಅಧಿಕಾರಕ್ಕೆ ಬಂದರೆ ಆರು ತಿಂಗಳಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥ ಮಾಡ್ತೀವಿ : ಅಮಿತ್ ಶಾ

ಬೆಳಗಾವಿ : ಮಹದಾಯಿ ಸಮಸ್ಯೆ ಬಗೆಹರಿಸಿ ಎಂದು ವರ್ಷಾಗಟ್ಟಲೆಯಿಂದ  ರೈತರು ಬೊಬ್ಬೆ ಹೊಡೆಯುತ್ತಿದ್ದರೂ ಕೇಳಿಸಿಕೊಳ್ಳದ ಸರ್ಕಾರ ಚುನಾವಣೆ ಹತ್ತಿರವಾಗುತ್ತಿದ್ದಂತೆ  ಈ ವಿಚಾರದ ಬಗ್ಗೆ ಮಾತೆತ್ತಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಅಮಿತ್ ಶಾ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆರು ತಿಂಗಳಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ.
ಸವದತ್ತಿಯಲ್ಲಿಂದು ಶಾ, ಬಿಜೆಪಿ ಅಭ್ಯರ್ಥಿ ಆನಂದ ಮಾಮನಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ್ದು, ನಮ್ಮ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತಂದರೆ  ಆರು ತಿಂಗಳಲ್ಲಿ ಸಮಸ್ಯೆಗೆ ಪರಿಹಾರ ಸೂಚಿಸುವುದಾಗಿ ಹೇಳಿದ್ದು, ಈ ಮೂಲಕ ಜನರನ್ನು ಬಿಜೆಪಿಯತ್ತ ಒಲಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com