ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಗಢ : ಜೀವಂತವಾಗಿದ್ದಾಗಲೇ ಸುಟ್ಟು ಕರಕಲಾದ ದಂಪತಿ

ರಾಯಚೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, ಪರಿಣಾಮಂ ಗಂಡ, ಹೆಂಡತಿ ಇಬ್ಬರೂ ಸಜೀವ ದಹನವಾಗಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಅಮರೇಶ್ವರ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ. ಮೃತರನ್ನು ಪ್ರಕಾಶ್‌ (55), ಕೃಷ್ಣವೇಣಿ (50) ಎಂದು ಹೆಸರಿಸಲಾಗಿದೆ. ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ನೆಲ್ಲಿಕಾಯಿಯ ಹೊಟ್ಟಿಗೆ ವಿದ್ಯುತ್‌ ಸ್ಪರ್ಶಿಸಿದ್ದು, ಶಾರ್ಟ್‌ ಸರ್ಕ್ಯೂಟ್‌ನಿಂದ  ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬೆಂಕಿಯ ಕೆನ್ನಾಲಿಗೆ ಇಡೀ ಮನೆಯನ್ನು ವ್ಯಾಪಿಸಿದ್ದು, ಮನೆಯೊಳಗಿದ್ದ ದಂಪತಿ ಸುಟ್ಟು ಕರಕಲಾಗಿದ್ದಾರೆ.  ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com