“ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ” ಜೆಡಿಎಸ್‌ ಪ್ರಣಾಳಿಕೆಯಲ್ಲಿ ಏನೇನಿದೆ ?

ಬೆಂಗಳೂರು : ಕಾಂಗ್ರೆಸ್‌ ಹಾಗೂ ಬಿಜೆಪಿ ಬಳಿಕ ಈಗ ಜೆಡಿಎಸ್‌ ಸಹ ತನ್ನ  ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಜೆಡಿಎಸ್‌ ಪ್ರಧಾನ ಕಚೇರಿಯಲ್ಲಿ    ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರು, ಜನತಾ ಪ್ರಣಾಳಿಕೆ , ಜನರದ್ದೇ ಆಳ್ವಿಕೆ ಹೆಸರಿನ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಜೆಡಿಎಸ್‌ ಅಧಿಕಾರಕ್ಕೆ ಬಂದರೆ 24ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಜೆಡಿಎಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿರುವ  ಅಂಶಗಳು
1. ಸಾಲಮನ್ನಾ
2. 65 ವರ್ಷದ ಹಿರಿಯ ನಾಗರಿಕರಿಗೆ 6 ಸಾವಿರ ಮಾಸಾಶನ
3. ವಕೀಲರಿಗೆ 5000 ಸ್ಟೈ ಫಂಡ್​
4. ಎಸಿಬಿ ನಿರ್ಮೂಲನೆ, ಲೋಕಾಯುಕ್ತ ಬಲವರ್ಧನೆ.
5. ಸರ್ಕಾರಿ ಅಧಿಕಾರಿಗಳ ಆಸ್ತಿ ವಿವರ ವೆಬ್​ಸೈಟ್​ನಲ್ಲಿ ಪ್ರಕಟ.
6. ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ
 7. ಗ್ರಾಮೀಣ ಭಾಗಕ್ಕೆ 24 ಗಂಟೆಯೂ ಮೂರು ಫೇಸ್ ವಿದ್ಯುತ್ ಪೂರೈಕೆ.
 8. ಗ್ರಾಮವಾಸ್ತವ್ಯ ಕಾರ್ಯಕ್ರಮ ಮುಂದುವರಿಕೆ
9. ಡಾ.ವಿಷ್ಣುವರ್ಧನ್ ಸಮಾಧಿ ಸ್ಥಳದ ವಿವಾದ ಬಗೆಹರಿಸಲಾಗುವುದು
10. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮೇಲ್ದರ್ಜೆಗೆ ಏರಿಕೆ
11. ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ 5 ಸಾವಿರಕ್ಕೆ ಏರಿಕೆ

Leave a Reply

Your email address will not be published.

Social Media Auto Publish Powered By : XYZScripts.com