ಮೋದಿಯ ಭಾಷಣಗಳಿಂದ ದೇಶದ ಜನರ ಹೊಟ್ಟೆ ತುಂಬುವುದಿಲ್ಲ : ಸೋನಿಯಾ ವಾಗ್ದಾಳಿ

ವಿಜಯಪುರದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿರುವ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹರಿಹಾಯ್ದಿದ್ದಾರೆ. ‘ ಪ್ರಧಾನಿ ಮೋದಿ ಭಾಷಣ ಮಾಡುವ ವಿಷಯದಲ್ಲಿ ತುಂಬಾ ಮುಂದಿದ್ದಾರೆ. ಆದರೆ ಅವರ ಭಾಷಣಗಳಿಂದ ದೇಶದ ಜನರ ಹೊಟ್ಟೆ ತುಂಬುವುದಿಲ್ಲ. ಅದಕ್ಕೆ ದಾಲ್, ಚಾವಲ್ (ಬೇಳೆ, ಅಕ್ಕಿ) ಬೇಕು. ನಿಮ್ಮ ಭಾಷಣಗಳಿಂದ ರೋಗಿಗಳು ಗುಣವಾಗುವುದಿಲ್ಲ, ಅದಕ್ಕೆ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು ‘ ಎಂದಿದ್ದಾರೆ.

‘ ಮೇ 12 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ನೀವುಗಳು ಮೋದಿ & ಟೀಮ್ ಯಶಸ್ವಿಯಾಗಲು ಬಿಡುವುದಿಲ್ಲವೆಂದು ನನಗೆ ಗೊತ್ತು. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿದ್ದಾರೆ, ಆದರೆ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆಲುವು ಸಾಧಿಸಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ ‘ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com