ರಾಜಕೀಯದಿಂದ ಬೇಸತ್ತು ಧರ್ಮಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡ ಹಾವೇರಿ ದಂಪತಿ !

ಮಂಗಳೂರು : ಧರ್ಮಸ್ಥಳದಲ್ಲಿ ಉದ್ಯಮಿ ಮತ್ತು ಆತನ ಪತ್ನಿ ಇಬ್ಬರೂ ರಾಜಕೀಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪ್ರಜಾಪ್ರಭುತ್ವ ವ್ಯವಸ್ಥೆ ಹದಗೆಟ್ಟಿರುವ ಹಿನ್ನಲೆಯಲ್ಲಿ ಮತ್ತು ರಾಜಕೀಯ ಹಣ, ಹೆಂಡಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಧರ್ಮಸ್ಥಳದ ಲಾಡ್ಜ್ ನಲ್ಲಿ ಹಾವೇರಿ ಜಿಲ್ಲೆ ಬ್ಯಾಡಗಿ ಮೂಲದ ದಂಪತಿ ನೇಣಿಗೆ ಶರಣಾಗಿದ್ದು, ಮೃತರನ್ನು ಮೃತ್ಯುಂಜಯ (60) ಹಾಗೂ ನೇತ್ರಾವತಿ (54) ಎಂದು ಹೆಸರಿಸಲಾಗಿದೆ.

ಹಣ, ಹೆಂಡದಿಂದಾಗಿ ರಾಜಕೀಯ ಕೀಳುಮಟ್ಟಕ್ಕೆ ಇಳಿದಿದೆ.  ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೆ ಹಾಳಾದ ಪ್ರಜಾಪ್ರಭುತ್ವವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದು, ಅವರು ಸರಿ ದಾರಿಗೆ ತರುತ್ತಾರೆ ಎಂಬ ಕಾರಣಕ್ಕಾಗಿ ಇಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.  ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com