Kabul : ಸೂಸೈಡ್ ಬಾಂಬ್ ದಾಳಿ : ಇಬ್ಬರು ಪೋಲೀಸರ ಸಾವು, ಹಲವರಿಗೆ ಗಾಯ

ಅಫಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಬುಧವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಪೋಲೀಸ್ ಅಧಿಕಾರಿಗಳು ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ. ಆತ್ಮಾಹುತಿ ಬಾಂಬ್ ದಾಳಿಕೋರ ಹಾಗೂ ಓರ್ವ ಬಂದೂಕುಧಾರಿ ಸೇರಿಕೊಂಡು ಈ ದಾಳಿ ನಡೆಸಿದ್ದಾರೆ.

‘ ಕಾಬೂಲ್ ನಗರದ ಪಶ್ಚಿಮ ಭಾಗದಲ್ಲಿರುವ ಪೋಲೀಸ್ ಠಾಣೆಯ ಬಳಿ ಸೂಸೈಡ್ ಬಾಂಬರ್ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ನಂತರ ಪೋಲೀಸ್ ಅಧಿಕಾರಿಗಳು ಹಾಗೂ ಬಂದೂಕುಧಾರಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ‘ ಎಂದು ಆಂತರಿಕ ಸಚಿವಾಲಯದ ವಕ್ತಾರ ನಾಜಿಬ್ ದಾನಿಶ್ ತಿಳಿಸಿದ್ದಾರೆ.

‘ ಕಾಬೂಲ್ ನಗರದ ಕೇಂದ್ರ ಭಾಗದಲ್ಲಿರುವ ಪೋಲೀಸ್ ಠಾಣೆಯ ಆವರಣದಲ್ಲಿ ಎರಡನೇ ದಾಳಿ ನಡೆಯಿತು. ಠಾಣೆಯ ಒಳಗೆ ನುಸುಳಲು ಯತ್ನಿಸಿದ ಇಬ್ಬರು ಬಂದೂಕುಧಾರಿಗಳನ್ನು ಹೊಡೆದುರುಳಿಸಲಾಗಿದೆ ‘ ಎಂದು ತಿಳಿಸಿದ್ದಾರೆ. ಇದುವರೆಗೆ ಯಾವುದೇ ಉಗ್ರ ಸಂಘಟನೆ ಘಟನೆಯ ಹೊಣೆಯನ್ನು ಹೊತ್ತುಕೊಂಡಿಲ್ಲ.

Leave a Reply

Your email address will not be published.

Social Media Auto Publish Powered By : XYZScripts.com