ಕಾಂಗ್ರೆಸ್‌ ತೊರೆದು ಕಮಲ ಹಿಡಿದ ಇಂತಿ ನಿಮ್ಮ ಪ್ರೀತಿಯ ನಟಿ ಭಾವನಾ…..

ಬೆಂಗಳೂರು : ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷದ ಮೇಲೆ ಮುನಿಸಿಕೊಂಡಿದ್ದ ನಟಿ ಭಾವನಾ, ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ನಟಿ ಭಾವನಾ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಆಗಲೇ ಅವರು ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಈಗ ಎಲ್ಲಾ ಊಹಾಪೋಹಗಳಿಗೂ ತೆರೆಬಿದ್ದಿದ್ದು, ಕೈ ತೊರೆದು ಕಮಲ ಹಿಡಿದಿದ್ದಾರೆ.

ಗುರುವಾರ ಮಲ್ಲೇಶ್ವರಂನಲ್ಲಿರುವ  ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್‌ ರಾವ್‌ ಅವರ ಸಮ್ಮುಖದಲ್ಲಿ ಭಾವನಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com