ನಕಲಿ ವೋಟರ್‌ ಐಡಿ ಪ್ರಕರಣ : ಕಾಂಗ್ರೆಸ್‌ ಶಾಸಕ ಮುನಿರತ್ನ ವಿರುದ್ಧ ದಾಖಲಾಯ್ತು FIR

ಬೆಂಗಳೂರು : ರಾಜರಾಜೇಶ್ವರಿ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾದ ಸಾವಿರಾರು ವೋಟರ್‌ ಐಡಿ ಪ್ರಕರಣ ಸಂಬಂಧ
ಶಾಸಕ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ  ಮುನಿರತ್ನ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ ಮುನಿರತ್ನ 11ನೇ ನಂಬರ್ ಆರೋಪಿಯಾಗಿದ್ದು, ಚುನಾವಣಾ ಆಯೋಗ ಎಫ್‌ಐಆರ್‌ ದಾಖಲಿಸಿಕೊಂಡಿರುವುದಾಗಿ ಚುನಾವಣಾ ಅಧಿಕಾರಿ ಮಂಜುನಾಥ್‌ ತಿಳಿಸಿದ್ದಾರೆ.
ಮುನಿರತ್ನ ಜೊತೆಗೆ 14 ಮಂದಿ ವಿರುದ್ಧ ಆರೋಪ ಮಾಡಲಾಗಿದೆ. ಅಲ್ಲದೆ ವೋಟರ್‌ ಐಡಿ ಸಿಕ್ಕ ಅಪಾರ್ಟ್‌ಮೆಂಟ್‌ ಮಾಲಕಿ ಮಂಜುಳಾ ನಂಜಮರಿಯವರ ವಿರುದ್ಧವೂ ಎಫ್‌ಐಆರ್‌ ದಾಖಲಿಸಲಾಗಿದೆ.
ಅಪಾರ್ಟ್‌ಮೆಂಟ್‌ ನಲ್ಲಿ ಸಿಕ್ಕ ವಸ್ತುಗಳನ್ನು ಆಯೋಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ವೋಟರ್‌ ಐಡಿಗಳ ಮಾದರಿಯನ್ನು ದೆಹಲಿಯಲ್ಲಿರುವ ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ರವಾನಿಸಿರುವುದಾಗಿ ತಿಳಿದುಬಂದಿದೆ.
ಇನ್ನು ಇಷ್ಟೆಲ್ಲಾ ಘಟನೆ ನಡೆದಿರುವ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದಲ್ಲಿ ಚುನಾವಣೆ ನಡೆಸಬೇಕೋ ಅಥವಾ ಮುಂದೂಡಬೇಕೋ ಎಂಬುದರ ಬಗ್ಗೆ ಚುನಾವಣಾ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ.

Leave a Reply

Your email address will not be published.

Social Media Auto Publish Powered By : XYZScripts.com