ನನ್ನ ತಾಯಿ ಇಟಲಿಯವರಿರಬಹುದು, ಆದರೆ ನನ್ನ ಭಾರತಕ್ಕಾಗಿ ತ್ಯಾಗ ಮಾಡಿದ್ದಾರೆ : ರಾಹುಲ್‌ ಗಾಂಧಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ  ನಡೆಸಿದ್ದಾರೆ.

ಈ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್‌ ಒಟ್ಟಿಗೆ ಕಾಣಿಸಿಕೊಂಡಿದ್ದು, ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿಯವರಿಗೆ ನಾನು, ನನ್ನ ತಾಯಿ, ನನ್ನ ಪಕ್ಷದ ಬಗ್ಗೆ ಪದೇ ಪದೇ ಮಾತನಾಡುವುದು ಎಂದರೆ ಅವರಿಗೆ ಸಂತೋಷ ಎನಿಸುತ್ತಿರಬೇಕು. ಮಾತನಾಡಲಿ ಬಿಡಿ. ಎಲ್ಲವನ್ನು ಜನ ನೋಡುತ್ತಿದ್ದಾರೆ. ನನ್ನ ತಾಯಿ ಇಟಲಿಯವರಾಗಿಬಹುದು. ಆದರೆ ಭಾರತಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದಿದ್ದಾರೆ.

ಸಂವಿಧಾನದ ಆಶಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ರಾಜ್ಯದ ಜನರಿಗಾಗಿ ಸಿದ್ದರಾಮಯ್ಯ ಸರ್ಕಾರ ಸಾಕಷ್ಟು ಸಾಧನೆಗಳನ್ನು ಮಾಡಿದೆ. ಕೊಟ್ಟ ಭರವಸೆ ಈಡೇರಿಸುವ ಗುರಿ ಹೊಂದಿದ್ದೇವೆ. ಅದರಂತೆ ಕಳೆದ ಐದು ವರ್ಷ ಸಿದ್ದರಾಮಯ್ಯ ಸರ್ಕಾರ ಆಡಳಿತ ನಡೆಸಿರುವುದಾಗಿ ಹೇಳಿದ್ದಾರೆ.

One thought on “ನನ್ನ ತಾಯಿ ಇಟಲಿಯವರಿರಬಹುದು, ಆದರೆ ನನ್ನ ಭಾರತಕ್ಕಾಗಿ ತ್ಯಾಗ ಮಾಡಿದ್ದಾರೆ : ರಾಹುಲ್‌ ಗಾಂಧಿ

Leave a Reply

Your email address will not be published.