ಮೋದಿ ಸುಳ್ಳು ಹೇಳಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಧಾನಿ ವಿರುದ್ದ ಜಿಲ್ಲಾಧಿಕಾರಿಗೆ ಯುವಕರ ಮನವಿ

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಶಿವಮೊಗ್ಗ ಜಿಲ್ಲಾಧಿಕಾರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

ಮೋದಿ ಶಿವಮೊಗ್ಗಕ್ಕೆ  ಬಂದು ಸುಳ್ಳು ಆರೋಪಗಳನ್ನು ಮಾಡಿದ್ದಾರೆ.ಇದರಿಂದಾಗಿ ಶಿವಮೊಗ್ಗದಲ್ಲಿ ಪ್ರಸನ್ನ ಕುಮಾರ್, ಕಾಗೋಡು ತಿಮ್ಮಪ್ಪ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿದೆ. ತಮ್ಮ ಭಾಷಣದ ವೇಳೆ ಮದಿ, ಹಳೇ ಜೈಲಿದ್ದ ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಬಳಸುವುದಾಗಿ ಹೇಳಿದ್ದಾರೆ. ಆದರೆ ಈಗಾಗಲೇ ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಇನ್ನು ಶಿವಮೊಗ್ಗದಲ್ಲಿ ರಿಂಗ್‌ ರೋಡ್‌ ಮಾಡುವುದಾಗಿ ಮೋದಿ ಹೇಳಿದ್ದಾರೆ. ಆದರೆ ಈಗಾಗಲೆ ರಿಂಗ್‌ ರೋಡ್‌ಗಾಗಿ ಜಾಗ ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಗೆ ಶಿವಮೊಗ್ಗಕ್ಕೆ ಸಾವಿರ ಕೋಟಿ ಜಾರಿಯಾಗಿರುವುದಾಗಿ ಹೇಳಿದ್ದರು. ಆದರೆ ಇದುವರೆಗೂ ಕೇವಲ 100 ಕೋಟಿ ಬಿಡುಗಡೆಯಾಗಿದೆ ಎಂದಿದ್ದು, ಸುಳ್ಳನ್ನಾಡುವ ಮೋದಿ ವಿರುದ್ದ ಕ್ರಮ ಕೈಗೊಳ್ಳುವಂತೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com