ವಿಜಯಪುರ : ಸೈನಿಕ ಶಾಲೆಯಲ್ಲಿ ಹೃದಯಾಘಾತದಿಂದ ಸಾವಿಗೀಡಾದ ಚುನಾವಣಾ ಸಿಬ್ಬಂದಿ

ವಿಜಯಪುರ : ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ  ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ನಡೆದಿದೆ.

ಮೃತರನ್ನು ವಿಠಲ ಕುರ್ಲೆ(52) ಎಂದು ಹೆಸರಿಸಲಾಗಿದೆ. ವಿಜಯಪುರದಲ್ಲಿ ಮತದಾನ ಯಂತ್ರದ ಹಂಚಿಕೆ ಮಾಡುವಾಗ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ವಿಠಲ ಕುರ್ಲೆ ಮಹಾನಗರ ಪಾಲಿಕೆಯಲ್ಲಿ ಡಿ ದರ್ಜೆ ನೌಕರರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published.