ಸಪ್ತಪದಿ ತುಳಿಯುವುದಕ್ಕೂ ಮುನ್ನ ತನ್ನ ಮತದಾನದ ಹಕ್ಕು ಚಲಾಯಿಸಿದ ವಧು

ಮಡಕೇರಿ / ಮಂಗಳೂರು : ರಾಜ್ಯಾದ್ಯಂತ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಡಕೇರಿಯಲ್ಲಿ ಮದುವೆಗೂ ಮುನ್ನ ಮದುಮಗಳು ಮತ ಚಲಾಯಿಸಿದ್ದಾರೆ.

ಸ್ಮಿತಾ ಎಂಬ ಹೆಸರಿನ ವಧು, ಮಡಿಕೇರಿ ತಾಲೂಕಿನ ಕಾಂಡನಕೊಲ್ಲಿ ಮತಗಟ್ಟಿ ಸಂಖ್ಯೆ 131 ಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮದುಮಗಳಂತೆ ಅಲಂಕರಿಸಿ ಮತಗಟ್ಟೆಗೆ ಆಗಮಿಸಿದ ಸ್ಮಿತಾ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಸ್ಮಿತಾ ಇಂದು ಗೌಡ ಸಮಾಜದಲ್ಲಿ ಮದುವೆ ಆಗುತ್ತಿದ್ದು, ಮಡಿಕೇರಿಯ ಮೂವತೊಕ್ಕಲಿನ ಬಿಎಂಟಿಸಿ ಸಿಬ್ಬಂದಿ ಆದ ಪ್ರವೀಣ್ ಅವರ ಜೊತೆ ಸಪ್ತಪದಿ ತುಳಿಯಲಿದ್ದಾರೆ.

ಮಂಗಳೂರಿನಲ್ಲೂ ಕೂಡ ವಧುವೊಬ್ಬರು ತಮ್ಮ ಮತ ಚಲಾಯಿಸಿದ್ದಾರೆ. ನಗರದ ಬೋಂದೆಲ್ ಸೇಂಟ್ ಲಾರೆನ್ಸ್ ಮೀಡಿಯಂ ಶಾಲೆಯಲ್ಲಿ ಮತದಾನ ನಡೆಯುತ್ತಿದ್ದು, ಪಚ್ಚನಾಡಿಯ ಮದುಮಗಳು ವಿಯೋಲಾ ಮಾರಿಯಾ ಫೆರ್ನಾಂಡೀಸ್ ಮತದಾನ ಮಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com