ಬ್ರಹ್ಮ ಬಂದು ಹೇಳಿದ್ರೂ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ : ಸಿದ್ದರಾಮಯ್ಯ

ಮೈಸೂರು : ಮುಂದಿನ ಬಾರಿ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ಹೇಳಿದ್ದಾರೆ. ಬಿಎಸ್ ಯಡಿಯೂರಪ್ಪ ಮತ್ತು  ಹೆಚ್.ಡಿ ಕುಮಾರಸ್ವಾಮಿ ವೈಯಕ್ತಿಕ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಗೆ 120+ ಬರೋದು ಖಚಿತ.

ಚುನಾವಣಾ ರಾಜಕಾರಣಕ್ಕೆ ಮುಂದಿನ ಬಾರಿ ಗುಡ್ ಬೈ ಹೇಳುತ್ತೇನೆ. ಬ್ರಹ್ಮ ಬಂದು ಹೇಳಿದ್ರೂ ಮುಂದಿನ ಚುನಾವಣೆಯಲ್ಲಿ ನಿಲ್ಲಲ್ಲ. ಈ ಬಾರಿಯೇ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೆ. ಆದರೆ ಸಿಎಂ ಆಗಿ ಪಲಾಯನ ಮಾಡಬಾರದು ಎಂಬ ಉದ್ದೇಶಕ್ಕೆ ಈ ಬಾರಿ ಸ್ಪರ್ಧೆ ಮಾಡಿದ್ದೇನೆ. ಮುಂದಿನ ಬಾರಿಯಿಂದ ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಸಲಹೆ ಸೂಚನೆಗಳನ್ನ ನೀಡುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com