ಚುನಾವಣೆ ಬಳಿಕ ಯೂಟರ್ನ್ ಹೊಡೆದ BJP : ಮಹದಾಯಿ ಸಮಸ್ಯೆ ಪರಿಹರಿಸ್ತೀವಿ ಅಂದಿರಲಿಲ್ಲ, ಚಿಂತಿಸ್ತೇವೆ ಎಂದಿದ್ದರಂತೆ !

ಪಣಜಿ : ರಾಜ್ಯ ವಿಧಾನಸಭಾ ಚುನಾವಣೆ ಯ ಮತದಾನ ಮುಗಿದಿದ್ದು ಇನ್ನು ಮಂಗಳವಾರ ಫಲಿತಾಂಶ ಮಾತ್ರ ಬಾಕಿ ಇದೆ. ಆದರೆ ಈಗ ರಾಷ್ಟ್ರೀಯ ಬಿಜೆಪಿ ನಾಯಕರೊಬ್ಬರು ಮಹದಾಯಿ ವಿಚಾರವಾಗಿ ಉಲ್ಟಾ ಹೊಡೆದಿದ್ದಾರೆ.

ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ಪ್ರಚಾರದ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಈ ಹೇಳಿಕೆ ಉಲ್ಟಾ ಆಗಿದ್ದು, ಅಮಿತ್ ಶಾ ಮಹದಾಯಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಹೇಳಿರಲಿಲ್ಲ. ಮಹದಾಯಿ ವಿಚಾರದ ಬಗ್ಗೆ ಚಿಂತನೆ ನಡೆಸುವುದಾಗಿ ಮಾತ್ರ ಹೇಳಿದ್ದರು ಎಂದು ಆಯುಷ್‌ನ ಕೇಂದ್ರ ಖಾತೆ ರಾಜ್ಯ ಸಚಿವ ಶ್ರೀಪಾದ್‌ ನಾಯಕ್‌ ಹೇಳಿದ್ದಾರೆ.

ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರವನ್ನು ನ್ಯಾಯಾಲಯದಿಂದ ಹೊರಗೆ ಬಗೆಹರಿಸಿಕೊಳ್ಳಲು ನಾವು ಸಿದ್ಧರಿದ್ದೇವೆ. ಆದರೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಧಿಕರಣದ ಮಾತಿಗೆ ಬೆಲೆ ಕೊಡದೆ ಕಾಮಗಾರಿ ನಡೆಸುತ್ತಿದ್ದಾರೆ. ಈಗ ವಿಷಯ ಸೂಕ್ಷ್ಮವಾಗಿದೆ. ಆದರೆ ಪ್ರಧಾನಿ ಮೋದಿಯಾಗಲಿ, ಅಮಿತ್ ಶಾ ಆಗಲಿ ಮಹದಾಯಿ ವಿವಾದವನ್ನು ಆರು ತಿಂಗಳಲ್ಲಿ ಬಗೆಹರಿಸುತ್ತೇನೆ ಎಂದು ಹೇಳಿರಲಿಲ್ಲ. ಅದರ ಬಗ್ಗೆ ಚಿಂತನೆ ನಡೆಸುತ್ತೇನೆ ಎಂದಷ್ಟೇ ಹೇಳಿದ್ದರು ಎಂದು ಉಲ್ಟಾ ಹೊಡೆದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com