ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಬಾಲಿವುಡ್‌ ನಟಿ, ಸಂಸದೆ ಹೇಮಾಮಾಲಿನಿ

ದೆಹಲಿ : ಬಾಲಿವುಡ್‌ನ ಖ್ಯಾತ ನಟಿ, ಸಂಸದೆ ಹೇಮಾ ಮಾಲಿನ ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉತ್ತರ ಪ್ರದೇಶದ ಮಥುರಾದ ಮಿಥೌಲಿ ಗ್ರಾಮದಲ್ಲಿ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿರುವಾಗ, ಹೇಮಾಮಾಲಿನಿ ಅವರ ಬೆಂಗಾವಲು ವಾಹನದ ಮೇಲೆ ಮರವೊಂದು ಬಿದ್ದಿದೆ. ಭಾನುವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಉತ್ತರ  ಪ್ರದೇಶದಲ್ಲಿ ಧೂಳಿನ ಬಿರುಗಾಳಿ ಬೀಸುತ್ತಿದ್ದು, ಈ ವೇಳೆ ಮರ ಉರುಳಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೃಷ್ಟವಶಾತ್‌ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದೇಶಾದ್ಯಂತ ಅಕಾಲಿಕ ಮಳೆ ಸುರಿಯುತ್ತಿದ್ದು, ಇದುವರೆಗೂ 45ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.

One thought on “ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಬಾಲಿವುಡ್‌ ನಟಿ, ಸಂಸದೆ ಹೇಮಾಮಾಲಿನಿ

Leave a Reply

Your email address will not be published.

Social Media Auto Publish Powered By : XYZScripts.com