ಸರಳ ಬಹುಮತದತ್ತ ಬಿಎಸ್‌ವೈ ಪಡೆ ದಾಪುಗಾಲು : ಶಿವಮೊಗ್ಗದಲ್ಲಿ ಈಶ್ವರಪ್ಪ, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲುವು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಕೆಲ ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಶಿವಮೊಗ್ಗ  ಕ್ಷೇತ್ರದಲ್ಲಿ ಬಿಜೆಪಿ ನಾಯಕ ಈಶ್ವರಪ್ಪ ಅವರು ಕಾಂಗ್ರೆಸ್‌ನ ಅಭ್ಯರ್ಥಿ ಪ್ರಸನ್ನ ಕುಮಾರ್‌ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಮತ್ತೊಂದೆಡೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕಿಮ್ಮನೆ ರತ್ನಾಕರ್‌ ವಿರುದ್ಧ ಬಿಜೆಪಿಯ ಆರಗ ಜ್ಞಾನೇಂದ್ರ ಜಯಭೇರಿ ಬಾರಿಸಿದ್ದಾರೆ. ಶಿಕಾರಿಪುರದಲ್ಲಿ ನಿರೀಕ್ಷೆಯಂತೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ಗೆಲುವು ಸಾಧಿಸಿರುವುದಾಗಿ ತಿಳಿದುಬಂದಿದೆ.

ಮತ್ತೊಂದೆಡೆ ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ಗೆಲುವು ಸಾಧಿಸಿದ್ದಾರೆ. ಪದ್ಮನಾಭನಗರದಲ್ಲಿ ಬಿಜೆಪಿಯ ಆರ್. ಅಶೋಕ್‌ 18 ಸಾವಿರ ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ಸರ್ವಜ್ಞನಗರದಲ್ಲಿ  ಕಾಂಗ್ರೆಸ್‌ನ ಕೆ.ಜೆ ಜಾರ್ಜ್‌ ಗೆಲುವು ಸಾಧಿಸಿದ್ದಾರೆ.

ಸದ್ಯದ ಮಾಹಿತಿಯ ಪ್ರಕಾರ ಬಿಜೆಪಿ 115 ಸ್ಥಾನಗಳನ್ನು ಗಳಿಸಿ ಗೆಲುವಿನತ್ತ ದಾಪುಗಾಲಿಡುತ್ತಿದ್ದು, ಕಾಂಗ್ರೆಸ್‌ 65 ಹಾಗೂ ಜೆಡಿಎಸ್‌ 43 ಸ್ಥಾನ ಗಳಿಸಿದೆ.

Leave a Reply

Your email address will not be published.

Social Media Auto Publish Powered By : XYZScripts.com