ಮೊದಲ ದಾಳ ಉರುಳಿಸಿದ ಕಾಂಗ್ರೆಸ್‌ : ಅಧಿಕೃತವಾಗಿ ಜೆಡಿಎಸ್‌ಗೆ ಬಾಹ್ಯ ಬೆಂಬಲ ಘೋಷಣೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್‌ ಪಕ್ಷ ಜೆಡಿಎಸ್‌ಗೆ ಅಧಿಕೃತವಾಗಿ ಬೆಂಬಲ ಸೂಚಿಸಿದೆ.

ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ  ಈ ನಿರ್ಧಾರಕ್ಕೆ ಬಂದಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೇಳಿದ್ದಾರೆ. ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಜನತೆಯ ತೀರ್ಪಿಗೆ ನಾವು ತಲೆಬಾಗುತ್ತೇವೆ. ನಾವು ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ. ಅವರೇ ಸರ್ಕಾರ ರಚನೆ ಮಾಡಲಿ. ನಾವು ಅದಕ್ಕೆ ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆ.

ಅಲ್ಲದೆ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಜನತೆ ತೀರ್ಪಿಗೆ ನಾವು ಸದಾ ತಲೆಬಾಗುತ್ತೇವೆ. ನಾವು ಜೆಡಿಎಸ್‌ ಜೊತೆ ಮಾತುಕತೆ ನಡೆಸಿದ್ದೇವೆ. ದೇವೇಗೌಡರು ಈ ಬಗ್ಗೆ ಸದ್ಯದಲ್ಲೇ ಹೇಳಿಕೆ ನೀಡುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com