ಮತ ಎಣಿಕೆ ಕಾರ್ಯ ಆರಂಭ : ಕಾಂಗ್ರೆಸ್‌ – ಬಿಜೆಪಿ ಮಧ್ಯೆ ಶುರುವಾಗಿದೆ ಬಿಗ್ ಫೈಟ್‌

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೆ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್‌ ರೂಂ ತೆರೆದು ಮತ ಎಣಿಕೆ ಮಾಡಲಾಗುತ್ತಿದೆ.
 ಒಟ್ಟು 38 ಮತ ಎಣಿಕೆ ಕೇಂದ್ರಗಳಲ್ಲಿ ಅಂಚೆ ಮತ ಎಣಿಕೆ ಕಾರ್ಯವನ್ನು ಪ್ರಾರಂಭಿಸಿದ್ದು, ಮತ ಎಣಿಕೆಯ ಮೊದಲ ಹಂತದಲ್ಲೇ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ತೀವ್ರ ಕುತೂಹಲ ಕೆರಳಿಸಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಜಿಟಿ ದೇವೇಗೌಡ ಅವರು ಬರೋಬ್ಬರಿ 6904 ಮತಗಳ ಅಂತರದ ಲ್ಲಿ ಮುನ್ನ ಡೆ ಸಾಧಿಸಿದ್ದಾರೆ.
ಮತ್ತೊಂದೆಡೆ ಶಿಕಾರಿಪುರದಲ್ಲಿ ಬಿ.ಎಸ್‌ ಯಡಿಯೂರಪ್ಪ, ಚಾಮರಾಜಪೇಟೆಯಲ್ಲಿ ಕಾಂಗ್ರೆಸ್‌ನ ಜಮೀರ್ ಅಹ್ಮದ್‌ ಖಾನ್‌ ಮುನ್ನಡೆ ಸಾಧಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com