ಕಾಂಗ್ರೆಸ್ ನೆರವಿನೊಂದಿಗೆ ಸರ್ಕಾರ ರಚನೆಗೆ JDS ಕಸರತ್ತು : ರಾಜ್ಯಪಾಲರಿಗೆ HDK ಪತ್ರ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಯಾವುದೇ ಪಕ್ಷವು ಸ್ಪಷ್ಟವಾದ ಬಹುಮತ ಪಡೆಯುವಲ್ಲಿ ವಿಫಲವಾದ ಕಾರಣ ಅತಂತ್ರ ಸ್ಥಿತಿ ನಿರ್ಮಾಣಗೊಂಡಿದೆ. ಈ ನಡುವೆ ಕಾಂಗ್ರೆಸ್ ಜೆಡಿಎಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಸೂಚಿಸಿರುವುದರ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದ ನೆರವಿನೊಂದಿಗೆ ಸರ್ಕಾರ ರಚಿಸಲು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಮುಂದಾಗಿದ್ದಾರೆ.

ಕಾಂಗ್ರೆಸ್ ನೆರವನ್ನು ಪಡೆದು ಸರ್ಕಾರ ರಚಿಸುವ ನಿಟ್ಟಿನಲ್ಲಿ, ಕರ್ನಾಟಕದ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿಯಾಗಲು ಸಮಯಾವಕಾಶವನ್ನು ಕೋರಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರಕ್ಕೆ, ಎಚ್ ಡಿ ದೇವೇಗೌಡರೂ ಸಹ ತಮ್ಮ ಒಪ್ಪಿಗೆ ನೀಡಿದ್ದಾರೆ ಎಂಬ ಮಾಹಿತಿಯಿದೆ. ಇದುವರೆಗೆ ಹೊರಬಂದಿರುವ ಫಲಿತಾಂಶದ ಪ್ರಕಾರ ಭಾರತೀಯ ಜನತಾ ಪಕ್ಷ 102, ಕಾಂಗ್ರೆಸ್ 74 ಹಾಗೂ ಜೆಡಿಎಸ್ 35 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿವೆ.

Leave a Reply

Your email address will not be published.

Social Media Auto Publish Powered By : XYZScripts.com