ಚುನಾವಣಾ ಫಲಿತಾಂಶ 2018 : ರಾಮನಗರ & ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಜಯಭೇರಿ

ಹಾಸನ ಜಿಲ್ಲೆಯ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಇಕ್ಬಾಲ್ ಹುಸೇನ್ ಅವರ ವಿರುದ್ಧ ಜ್ಯಾತ್ಯಾತೀತ ಜನತಾದಳದ ಕುಮಾರಸ್ವಾಮಿ 19745 ಮತಗಳ ಅಂತರದ ಭಾರೀ ಜಯ ಪಡೆದಿದ್ದಾರೆ. ರಾಮನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಲೀಲಾವತಿ ಮೂರನೇ ಸ್ಥಾನ ಪಡೆದಿದ್ದಾರೆ.

ರಾಮನಗರವಷ್ಟೇ ಅಲ್ಲದೇ, ಚನ್ನಪಟ್ಟಣದಲ್ಲಿಯೂ ಎಚ್.ಡಿ ಕುಮಾರಸ್ವಾಮಿ ಜಯಭೇರಿ ಬಾರಿಸಿದ್ದಾರೆ.  ಬಿಜೆಪಿಯ ಸಿಪಿ ಯೋಗೇಶ್ವರ್ ಹಾಗೂ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಎಚ್ ಎಮ್ ರೇವಣ್ಣ ಅವರನ್ನು ಸೋಲಿಸಿದ್ದಾರೆ.

ಹೊಳೆನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಡಿ ರೇವಣ್ಣ ಗೆಲುವು ಸಾಧಿಸಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಬಿಜೆಪಿ 109, ಕಾಂಗ್ರೆಸ್ 71 ಹಾಗೂ 40 ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿವೆ.

Leave a Reply

Your email address will not be published.

Social Media Auto Publish Powered By : XYZScripts.com