ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿರುವ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭೆಯ ಚುನಾವಣಾ ಫಲಿತಾಂಶದಲ್ಲಿ ಯಾವ ಪಕ್ಷವೂ ಸಹ ಸ್ಪಷ್ಟ ಬಹುಮತವನ್ನು ಪಡೆದಿಲ್ಲ. ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಬ್ಯರ್ಥಿ ಜಿ.ಟಿ ದೇವೇಗೌಡ ವಿರುದ್ಧ ಸೋಲನುಭವಿಸಿರುವ ಸಿದ್ದರಾಮಯ್ಯ, ಬಾದಾಮಿಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಗೆಲುವು ಸಾಧಿಸಿದ್ದಾರೆ.

ಅತಂತ್ರ ವಿಧಾನಸಭೆ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದ್ದು, ಉಭಯ ಪಕ್ಷದ ಮುಖಂಡರುಗಳು ಮಾತುಕತೆ ನಡೆಸುತ್ತಿದ್ದಾರೆ. ಜೆಡಿಎಸ್ ನೇತೃತ್ವದ ಸರ್ಕಾರ ರಚನೆಗೆ ಕಾಂಗ್ರೆಸ್ ಬೇಷರತ್ ಬೆಂಬಲ ಸೂಚಿಸಿದೆ.

 

Leave a Reply

Your email address will not be published.

Social Media Auto Publish Powered By : XYZScripts.com