BJPಯಿಂದ JDS ಶಾಸಕರಿಗೆ 100 ಕೋಟಿ ಆಫರ್‌ : 10 ಶಾಸಕರು ಹೋದರೆ ನಿಮ್ಮಿಂದ 20 ಶಾಸಕರನ್ನು ತರಬಲ್ಲೆ ಎಂದ HDK

ಬೆಂಗಳೂರು : ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಕೆಲ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ  ರೂ ಆಫರ್ ನೀಡಲಾಗಿದೆಯಂತೆ. ಹೀಗಂತ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಈ 100 ಕೋಟಿ ಹಣವನ್ನು ಎಲ್ಲಿಂದ ನೀಡಲಾಗುತ್ತಿದೆ. ಇದು ಕಪ್ಪು ಹಣವೇ ಅಥವಾ ಬಿಳಿ ಹಣವೇ ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಪ್ಪುಹಣ, ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎನ್ನುವ ಪ್ರಧಾನಿ ಮೋದಿ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಖರೀದಿಸಲು ಬಿಜೆಪಿ ಯಾವ ಹಣ ಬಳಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಎಚ್‌ಡಿಕೆ ಆಗ್ರಹಿಸಿದ್ದಾರೆ.

 ಬಿಜೆಪಿಗೆ ದೊರೆತಿರುವ 104 ಸ್ಥಾನಗಳು ಕೆಲ ವರ್ಗದ ಜನರ ತಪ್ಪು ನಿರ್ಧಾರದಿಂದ ಬಂದಿರುವುದು. ಅಲ್ಲದೆ, ಜೆಡಿಎಸ್‌ಗೆ ಧಕ್ಕೆ ಉಂಟುಮಾಡಲು ಹೋಗಿ ಬಿಜೆಪಿಗೇ ಧಕ್ಕೆಯಾಗಿದೆ ಎಂದರು. ಆಪರೇಷನ್ ಕಮಲ ಮಾಡಲು ಮುಂದಾದರೆ ನಾವೂ ಬಿಜೆಪಿಯ ಶಾಸಕರನ್ನು ಸೆಳೆಯಲಿದ್ದೇವೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published.