ಆಪರೇಷನ್‌ ಹಸ್ತ : ಬಿಜೆಪಿ ಶಾಸಕರನ್ನು ಸೆಳೆಯಲು ಡಿಕೆಶಿ-ಪರಮೇಶ್ವರ್‌ ನೇತೃತ್ವದಲ್ಲಿ ಮಾಸ್ಟರ್‌ ಪ್ಲಾನ್‌

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದೆ. ಆಪರೇಷನ್‌ ಫ್ಲವರ್‌ ಹೆಸರಿನಲ್ಲಿ ಬಿಜೆಪಿ ನಾಯಕರು ನಾಲ್ಕು ತಂಡಗಳಾಗಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಾಯಕರನ್ನು  ಸೆಳೆಯಲು ಪ್ರಯತ್ನ ನಡೆಸಿದ್ದರೆ ಇದಕ್ಕೆ ಕಾಂಗ್ರೆಸ್ ನಾಯಕರು ಪ್ರತಿತಂತ್ರ ಹೂಡಿದ್ದಾರೆ.

ಡಿ.ಕೆ ಶಿವಕುಮಾರ್ ಹಾಗೂ ಪರಮೇಶ್ವರ್‌ ನೇತೃತ್ವದಲ್ಲಿ ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್‌ ಪ್ಲಾನ್‌ ಮಾಡಿದೆ. ಈ ನಿಟ್ಟಿಯಲ್ಲಿ ಕಾಂಗ್ರೆಸ್‌ ಪ್ರಯತ್ನ ನಡೆಸುತ್ತಿದ್ದು, ಕೆಲ ಬಿಜೆಪಿ ನಾಯಕರು ಈಗಾಗಲೆ ನಮ್ಮ ಸಂಪರ್ಕದಲ್ಲಿದ್ದಾರೆ. ಬಿಜೆಪಿ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿದರೆ ನಮಗೆ ಬಿಜೆಪಿ ಶಾಸಕರನ್ನು ಸೆಳೆಯಲು ಗೊತ್ತಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com