ಡಿಯರ್‌ ಆಲ್‌…..ಈ ಸಲ ಕಪ್ಪೂ ನಮ್ದೇ, ಸರ್ಕಾರನೂ ನಮ್ದೇ : ಪ್ರತಾಪ್‌ ಸಿಂಹ ಟ್ವೀಟ್‌

ಬೆಂಗಳೂರು : ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿಎಸ್ ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಮಲ್ಲೇಶ್ವರಂ ಕಚೇರಿಯಲ್ಲಿ ಬಿಜೆಪಿಯ ಶಾಸಕಾಂಗ ಸಭೆ ನಡೆದಿದ್ದು, ಸಭೆಯಲ್ಲಿ ಮುಧೋಳ ಶಾಸಕ ಗೋವಿಂದ ಕಾರಜೋಳ ಯಡಿಯೂರಪ್ಪನವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ಸೂಚಿಸಿದರು. ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ರಾಣೆಬೆನ್ನೂರು ಶಾಸಕ ಆರ್. ಶಂಕರ್ ಕಾರಜೋಳ ಅವರು ಸೂಚನೆಯನ್ನು ಅನುಮೋದಿಸಿದ್ದಾರೆ. ಸಭೆ ಬಳಿಕ ಸರ್ಕಾರ ರಚಿಸಲು ಅನುಮತಿ ನೀಡುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಿದ್ದು, ದೊಡ್ಡ ಪಕ್ಷಕ್ಕೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಹಾಗೂ ಸದನದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡರು ರಾಜ್ಯಪಾಲರಲ್ಲಿ ಅನುಮತಿ ಕೇಳಿರುವುದಾಗಿ ತಿಳಿದುಬಂದಿದೆ.

ರಾಜಭವನದಿಂದ ಹೊರಬಂದ ಮೇಲೆ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಶಾಸಕಾಂಗ ಪಕ್ಷದ ನಾಯಕನಾಗಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಆ ಪ್ರತಿಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ. ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ. ಸಿಎಂ ಆಗಿ ಅಧಿಕಾರಿ ಸ್ವೀಕರಿಸಲು ಅವಕಾಶ ನೀಡುವಂತೆ ಕೋರಿದ್ದೇವೆ. ಅದಕ್ಕೆ ರಾಜ್ಯಪಾಲರು ಸಕಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯಪಾಲರಿಂದ ಉತ್ತರ ಬಂದಮೇಲೆ ನಮ್ಮ ಬಹುಮತ ಸಾಬೀತು ಪಡಿಸುವುದಾಗಿ ಬಿಎಸ್‌ವೈ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಸಂಸದ ಪ್ರತಾಪ್‌ ಸಿಂಹ, ಬಿಜೆಪಿಯವರು ಸರ್ಕಾರ ರಚನೆಯ ಹಗಲು ಕನಸು ಕಾಣುತ್ತಿದ್ದಾರೆ ಎನ್ನುವ ಮಾತಿಗೆ ತಿರುಗೇಟು ನೀಡಿದ್ದು ಈ ಬಾರಿ ಕಪ್ ನಮ್ದೇ, ಸರ್ಕಾರವೂ ನಮ್ದೇ ಎಂದು ಟ್ವೀಟ್ ಮಾಡಿದ್ದಾರೆ.

One thought on “ಡಿಯರ್‌ ಆಲ್‌…..ಈ ಸಲ ಕಪ್ಪೂ ನಮ್ದೇ, ಸರ್ಕಾರನೂ ನಮ್ದೇ : ಪ್ರತಾಪ್‌ ಸಿಂಹ ಟ್ವೀಟ್‌

Leave a Reply

Your email address will not be published.

Social Media Auto Publish Powered By : XYZScripts.com