ರಾಜ್ಯಪಾಲರನ್ನು ಭೇಟಿಯಾದ ಕುಮಾರಸ್ವಾಮಿ : ಹಾರಿಕೆಯ ಉತ್ತರ ನೀಡಿದ ವಜೂಭಾಯಿವಾಲಾ ?

ಬೆಂಗಳೂರು : ಏನೇ ಆದರೂ ರಾಜ್ಯದಲ್ಲಿ ಜೆಡಿಎಸ್ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹರಸಾಹಸ ಪಡುತ್ತಿದೆ. ಈ ನಿಟ್ಟಿನಲ್ಲಿ ಇಂದು ಜೆಡಿಎಸ್‌ಗೆ ಬೆಂಬಲ ಸೂಚಿಸುವ ಸಲುವಾಗಿ ಹಾಗೂ ಶಾಸಕರ ಅಭಿಪ್ರಾಯ ಪಡೆಯುವ ಸಲುವಾಗಿ ಶಾಸಕಾಂಗ ಸಭೆ ನಡೆಸಿದ್ದು, ಜೆಡಿಎಸ್‌ ಗೆ ಸಂಪೂರ್ಣ ಬೆಂಬಲ ಸಿಕ್ಕಿದೆ.

ಸಭೆ ಬಳಿಕ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್‌,  ಜೆಡಿಎಸ್‌ಗೆ ನಾವು ಬೆಂಬಲ ನೀಡಿದ್ದು ಎಲ್ಲಾ ಶಾಸಕರ ಸಹಿ ಪಡೆದು ಅದನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ರಾಜ್ಯಪಾಲರು ಕಾನೂನಿನ ಪ್ರಕಾರ ಅದನ್ನು ಪರಿಶೀಲನೆ ನಡೆಸಿ, ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ, ಸಂವಿಧಾನಾತ್ಮಕವಾಗಿ, ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ತೀರ್ಮಾನ ಕೈಗೊಂಡಿದ್ದಾರೆ ಎಂಬುದನ್ನು ಗಮನಿಸಿ ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ಹೇಳಿರುವುದಾಗಿ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಕುಮಾರಸ್ವಾಮಿ, ಶಾಸಕಾಂಗ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಎಲ್ಲಾ ಶಾಸಕರು ಸಹಿ ಹಾಕಿ ಪತ್ರ ನೀಡಿದ್ದೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯವನ್ನು ರಾಜ್ಯಪಾಲರ ಮುಂದಿಟ್ಟಿದ್ದೇವೆ. 2 ಪಕ್ಷದ ಹೊಂದಾಣಿಕೆ ಮೇಲೆ ಸರ್ಕಾರ ರಚಿಸುವುದಾಗಿ ಹೇಳಿದ್ದೇವೆ. ಅದಕ್ಕೆ ರಾಜ್ಯಪಾಲರು ಉತ್ತರ ಕೊಡಬೇಕಿದ್ದು, ಈಗ ಎಲ್ಲವೂ ರಾಜ್ಯಪಾಲರ ನಿರ್ಣಯಕ್ಕೆ ಬಿಟ್ಟಿದ್ದಾಗಿರುವುದಾಗಿ ಹೇಳಿದ್ದಾರೆ.

Leave a Reply

Your email address will not be published.