ಆಪರೇಶನ್‌ ಕಮಲಕ್ಕೆ ಕೈ ಪಾಳಯದಲ್ಲಿ ಶುರುವಾಯ್ತು ನಡುಕ : ಅಮಿತ್ ಶಾ ತಂತ್ರಕ್ಕೆ ಕಾಂಗ್ರೆಸ್‌ ಪ್ರತಿತಂತ್ರವೇನು ?

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ 104 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅಧಿಕಾರ ಹಿಡಿಯಲು ಸಾಕಷ್ಟು ಕಸರತ್ತು ನಡೆಸಿದೆ.

ಸದ್ಯ ಆಪರೇಷನ್‌  ಕಮಲದ ಮೂಲಕ ಶಾಸಕರನ್ನು ಸೆಳೆದು 112 ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಲು ಬಿಜೆಪಿ ಹವಣಿಸುತ್ತಿದೆ. ಮತ್ತೊಂದೆಡೆ ಜೆಡಿಎಸ್‌ ನಾಯಕರ ಮನವೊಲಿಸಲೂ ಪ್ರಯತ್ನ ನಡೆಸುತ್ತಿದೆ. ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಗುಲಾಂನಬಿ ಆಜಾದ್‌, ಬಿಜೆಪಿಯ ಆಪರೇಷನ್‌ ಕಮಲಕ್ಕೆ ನಮ್ಮಲ್ಲಿ ಯಾರೂ ಬಲಿಯಾಗುವುದಿಲ್ಲ ಎಂದಿದ್ದಾರೆ. ನನ್ನ ಶಾಸಕರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಆದ್ದರಿಂದ ನಮ್ಮ ಕಾಂಗ್ರೆಸ್‌ ಶಾಸಕರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗುವುದಿಲ್ಲ. ಕಮಲದ ಬಲೆಗೆ ಬೀಳುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್‌ ನಾಯಕರು  ರೆಸಾರ್ಟ್‌ ರಾಜಕೀಯಕ್ಕೆ ಮುಂದಾಗಿದ್ದು,  ಶಾಸಕರನ್ನು ಒಂದೆಡೆ ಸೇರಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com