ಶುರುವಾಯ್ತಾ ಆಪರೇಷನ್‌ ಕಮಲದ ಆಟ : ಜೆಡಿಎಸ್‌ನ ಇಬ್ಬರು ಶಾಸಕರು ನಾಪತ್ತೆ !

ಬೆಂಗಳೂರು : ಕಾಂಗ್ರೆಸ್‌ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿರುವ ಜೆಡಿಎಸ್‌ನ ಶಾಸಕರಿಗೆ ಬಿಜೆಪಿ ಗಾಳ ಹಾಕಿದೆ.  ಬುಧವಾರ ಪಕ್ಷದ ಶಾಸಕಾಂಗ ಸಭೆ ನಡೆದಿದ್ದು ಈ ಸಭೆಗೆ  ರಾಜಾ ವೆಂಕಟಪ್ಪ ನಾಯಕ ಹಾಗೂ ವೆಂಕಟರಾವ್‌ ನಾಡಗೌಡ ಗೈರಾಗಿದ್ದಾರೆ.

ಮತ್ತೊಂದೆಡೆ ಜೆಡಿಎಸ್‌ನ ವರಿಷ್ಠ ಎಚ್‌.ಡಿ. ದೇವೇಗೌಡ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ನಗರದ ಹೋಟೆಲ್‌ವೊಂದರಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಗೆದ್ದ ಶಾಸಕರು ಸಭೆಗೆ ಆಗಮಿಸಿದ್ದಾರೆ. ಸಭೆ ಬಳಿಕ ಕುಮಾರಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿಯೂ ಘೋಷಣೆ ಮಾಡಲಾಗಿದೆ.

ಈ ಎಲ್ಲ ಬೆಳವಣಿಗೆ ಮಧ್ಯೆ ಇಬ್ಬರು ಶಾಸಕರು ಗೈರಾಗಿರುವುದು ಭಾರೀ ಕುತೂಹಲ ಕೆರಳಿಸಿದ್ದು, ಕಮಲದ ತೆಕ್ಕೆಗೆ ಜಾರಿದರಾ ಎಂಬ ಪ್ರಶ್ನೆ ಮೂಡಿದೆ.

Leave a Reply

Your email address will not be published.

Social Media Auto Publish Powered By : XYZScripts.com