ಪ್ರಮಾಣವಚನಕ್ಕೆ ಮಹೂರ್ತ ಫಿಕ್ಸ್ ಮಾಡಿಕೊಂಡ BSY : ಏನೇ ಆಗ್ಲಿ ಸರ್ಕಾರ ನಮ್ದೇ ಎಂದ ಯಡ್ಡಿ !

ಬೆಂಗಳೂರು :  ಈ ಬಾರಿ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿಯಲ್ಲಿ ಸಿಲುಕಿರುವ ಬಿಜೆಪಿ ಸರ್ಕಾರ, ಆಪರೇಷನ್ ಕಮಲ ನಡೆಸಲು ಮುಂದಾಗಿದ್ದಾರೆ. ಅಮಿತ್ ಶಾ ಎಲ್ಲಾ ರೀತಿಯಿಂದಲೂ  ರಾಜ್ಯ ನಾಯಕರಿಗೆ ಸೂಚನೆ ನೀಡುತ್ತಿದ್ದರೆ, ಮತ್ತೊಂದೆಡೆ ಯಡಿಯೂರಪ್ಪ ನಾಳೆಯೇ ಪ್ರಮಾಣ ವಚನ ಸ್ವೀಕಾರ ಮಾಡುತ್ತೇನೆ. ಇದಕ್ಕೆ ಒಪ್ಪಿಗೆ ಸೂಚಿಸುವಂತೆ ರಾಜ್ಯಪಾಲರ ಬಳಿ ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಇಂದು ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.  ನಾನು ಶಾಸಕಾಂಗದ ನಾಯಕನಾಗಿ ಆಯ್ಕೆಯಾದ ಮೇಲೆ ರಾಜಭವನಕ್ಕೆ ತೆರಳಿ ನಮ್ಮ ಬೇಡಿಕೆ ಸಲ್ಲಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಅತಿ ಹೆಚ್ಚು ಮತಪಡೆದಿರುವ ನಾವೇ ಸಂವಿಧಾನಬ್ದವಾಗಿ ಸರ್ಕಾರ ರಚನೆ ಮಾಡುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com