RSSನ ವಜೂಭಾಯಿ ವಾಲಾ ಸಂವಿಧಾನದ ಪ್ರಕಾರ ತೀರ್ಪು ಕೊಡುವುದು ಸಾಧ್ಯವೇ ?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಂದು ಸಾಕಷ್ಟು ಬೆಳವಣಿಗೆಗಳು ನಡೆದಿದ್ದು, ಬಿಜೆಪಿ ನಾಯಕರು, ಜೆಡಿಎಸ್‌-ಕಾಂಗ್ರೆಸ್‌ ನಾಯಕರು ರಾಜ್ಯಪಾಲ ವಜೂಭಾಯಿ ವಾಲಾರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಮನವಿ ಸಲ್ಲಿಸಿದ್ದಾರೆ.

ಆದರೆ ರಾಜ್ಯಪಾಲರು ಗುಜರಾತ್‌ನವರಾಗಿದ್ದು, ಮೋದಿ ಸಂಪುಟದಲ್ಲಿ ಸಚಿವರೂ ಆಗಿದ್ದರು. ಅಲ್ಲದೆ ಆರ್‌ಎಸ್‌ಎಸ್‌ನ ಹಿನ್ನೆಲೆಯಿಂದ ಬಂದಿರುವಂತಹ ರಾಜ್ಯಪಾಲ ವಜೂಭಾಯಿ ವಾಲಾ ಅವರು ಕರ್ನಾಟಕದಲ್ಲಿ ಬಹುಮತ ಪಡೆದಿರುವ ಬಿಜೆಪಿಯನ್ನು ಬಿಟ್ಟು ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಗೆ ಅವಕಾಶ ಕೊಡಲು ಸಾಧ್ಯವೇ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಜೂಭಾಯಿವಾಲಾ ಅವರು ಕರ್ನಾಟಕದ ರಾಜ್ಯಪಾಲರಾಗಿ ಆಯ್ಕೆಯಾಗುವುದಕ್ಕಿಂತ ಮುಂಚೆ ಗುಜರಾತ್‌ನ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ, ಸ್ಪೀಕರ್‌ ಆಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಅಮಿತ್ ಶಾ ಹಾಗೂ ಮೋದಿಯವರಿಗೂ ಆಪ್ತರೆನಿಸಿಕೊಂಡಿದ್ದು, ಈಗ ಕರ್ನಾಟಕದಲ್ಲಿ  ಬಿಜೆಪಿಯನ್ನು ಬಿಟ್ಟು, ಮೋದಿ, ಅಮಿತ್ ಶಾ ಅವರ ಮಾತನ್ನು ತೆಗೆದು ಹಾಕಿ ಸಂವಿಧಾನದ ಪ್ರಕಾರ, ಕಾನೂನಿನ ಪ್ರಕಾರ ಸಮ್ಮಿಶ್ರ ಸರ್ಕಾರ ರಚನೆಗೆ ಅವಕಾಶ ಕೊಡುತ್ತಾರಾ ಎಂಬುದು ಎಲ್ಲರ ಪ್ರಶ್ನೆಯಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com