‘ಕಪ್ಪೂ ನಮ್ದೇ ಸರ್ಕಾರವೂ ನಮ್ದೇ’ : ಪ್ರತಾಪ್ ಸಿಂಹ್ ಹೇಳಿಕೆಗೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್

ಚುನಾವಣೆ ಫಲಿತಾಂಶದ ನಂತರ ಅತಂತ್ರ ವಿಧಾನಸಭೆ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಸೇರಿಕೊಂಡು ಮೈತ್ರಿ ಸರ್ಕಾರ ರಚಿಸಲು ಮುಂದಾಗಿವೆ. ಇದೇ ವೇಳೆ ಮೈಸೂರಿನ ಭಾರತೀಯ ಜನತಾ ಪಕ್ಷದ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದ ತಮ್ಮ ಫೇಸ್ಬುಕ್ ಖಾತೆಯಲ್ಲಿ ಕಪ್ಪೂ ನಮ್ದೇ, ಸರ್ಕಾರವೂ ನಮ್ದೇ ಎಂದು ಸ್ಟೇಟಸ್ ಅಪ್ಡೇಟ್ ಮಾಡಿದ್ದಾರೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ನೆಟ್ಟಿಗರು ಸಾಮಾಜಿಕ ಜಾಲತಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ‘ಬಿಜೆಪಿಗೆ ಅಧಿಕಾರವೂ ಇಲ್ಲ, ಆರ್ಸೀಬಿಗೆ ಕಪ್ಪೂ ಇಲ್ಲ’ ಎಂಬ ಅಡಿಬರಹದ ಚಿತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಆರ್ಸೀಬಿ ನಾಯಕ ವಿರಾಟ್ ಕೊಹ್ಲಿ ಚಿತ್ರವನ್ನು ಎಡಿಟ್ ಮಾಡಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com