ಸರ್ಕಾರ ರಚಿಸಲು ಬಿಜೆಪಿಗೆ ರಾಜ್ಯಪಾಲರಿಂದ ಆಹ್ವಾನ : ನಾಳೆ BSY ಪ್ರಮಾಣ ವಚನ

ಸರ್ಕಾರ ರಚಿಸಲು ಕರ್ನಾಟಕದ ರಾಜ್ಯಪಾಲ ವಜೂಭಾಯಿ ವಾಲಾ ಯಾರಿಗೆ ಆಹ್ವಾನ ನೀಡಲಿದ್ದಾರೆ ಎಂಬ ಊಹಾಪೋಹಕ್ಕೆ ಕೊನೆಗೂ ತೆರಬಿದ್ದಿದೆ. ಭಾರತೀಯ ಜನತಾ ಪಕ್ಷಕ್ಕೆ ಸರಕಾರ ರಚಿಸಲು ರಾಜ್ಯಪಾಲರು ರಾಜಭವನದಿಂದ ಅಧಿಕೃತ ಆಹ್ವಾನ ನೀಡಿದ್ದಾರೆ. ಸರ್ಕಾರ ರಚಿಸಿದ ನಂತರ ಬಿಜೆಪಿಗೆ ತನ್ನ ಬಹುಮತ ಸಾಬೀತು ಪಡಿಸಲು 11 ದಿನಗಳ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ.

ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಬಿ.ಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಕರ್ನಾಟಕದ ರಾಜ್ಯಪಾಲ ವಜೂಭಾಯಿ ವಾಲಾ ಆಹ್ವಾನಿಸಿದ್ದಾರೆ. 3ನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಿಜೆಪಿಯ ಸುರೇಶ್ ಕುಮಾರ್ ತಮ್ಮ ಫೇಸ್ವುಕ್ ಖಾತೆಯಲ್ಲಿ ನಾಳೆ ಬೆಳಿಗ್ಗೆ ಬಿಎಸ್ ವೈ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com