ರಾಜ್ಯದ ಜನತೆಗೆ ಟ್ವೀಟ್ ಮೂಲಕ ಧನ್ಯವಾದ ಹೇಳಿದ ಸಿದ್ದರಾಮಯ್ಯ

ಮಂಗಳವಾರ ಹೊರಬಂದಿರುವ ಚುನಾವಣಾ ಫಲಿತಾಂಶದಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆಯದೆ, ಅತಂತ್ರ ವಿಧಾನಸಭೆ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಪಕ್ಷಗಳು ಕಸರತ್ತು ನಡೆಸಿವೆ. ಮಂಗಳವಾರ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಸಾಮಾಜಿಕ ಜಾಲತಾಣ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ.

‘ ನನ್ನ ಪ್ರೀತಿಯ ಕರ್ನಾಟಕದ ಸೋದರ, ಸೋದರಿಯರೇ.. ನಿಮ್ಮ ತೀರ್ಪಿಗೆ ಧನ್ಯವಾದ. ಕಳೆದ 5 ವರ್ಷ ಮುಖ್ಯಮಂತ್ರಿಯಾಗಿ ನಿಮ್ಮ ಸೇವೆ ಮಾಡುವ ಅವಕಾಶ ದೊರೆತದ್ದು ಗೌರವದ ಸಂಗತಿಯಾಗಿದೆ. ಕಾಂಗ್ರೆಸ್ ಪಕ್ಷ ಹಾಗೂ ನಾವು ರಚಿಸಲಿರುವ ಸರ್ಕಾರ, ರಾಜ್ಯ ಹಾಗೂ ಜನರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸಲಿದೆ ಎಂಬ ವಿಶ್ವಾಸವಿದೆ ‘ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published.