ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರ ರಚನೆ ಮಾಡಲು ಬಿಡಲ್ಲ : ಅಮಿತ್ ಶಾ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯನ್ನು ಅಧಿಕಾರ ಹಿಡಿಯಲು ಬಿಡುವುದಿಲ್ಲ ಎಂದು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಮೂಲಕ ಅಮಿತ್ ಶಾ, ಮೋದಿಗೆ ಸವಾಲು ಹಾಕಿರುವ ಸಿದ್ದರಾಮಯ್ಯ, ನಾವು ಜೆಡಿಎಸ್‌ಗೆ ಬೇಷರತ್‌ ಬೆಂಬಲ ಸೂಚಿಸಿದ್ದೇವೆ. ಜೆಡಿಎಸ್‌ ಸರ್ಕಾರ ರಚನೆ ಮಾಡೇ ಮಾಡುತ್ತದೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ನಾವು ಖಂಡಿತ ಬಿಡುವುದಿಲ್ಲ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com