ಆನಂದ್ ಸಿಂಗ್ ಅವರ ಮೇಲೆ ಬಿಜೆಪಿ ED ಯನ್ನು ಛೂ ಬಿಟ್ಟಿದೆ : ಕುಮಾರಸ್ವಾಮಿ

‘ ಆನಂದ್ ಸಿಂಗ್ ಅವರಿಗೆ ಬಿಜೆಪಿ ಬೆದರಿಕೆ ಒಡ್ಡಿದ್ದು, ಅವರ ಮೇಲೆ ಜಾರಿ ನಿರ್ದೇಶನಾಲಯವನ್ನು (ED) ಛೂ ಬಿಟ್ಟಿದೆ ‘ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಆಪಾದಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಎಚ್.ಡಿ ಕುಮಾರಸ್ವಾಮಿ, ‘ ತನ್ನ ಅಧಿಕಾರ ದಾಹಕ್ಕಾಗಿ ರಾಜಭವನವನ್ನು ಬಿಜೆಪಿ ದುರುಪಯೋಗ ಪಡಿಸಿಕೊಂಡಿದೆ. ಬಿಜೆಪಿಯಿಂದ ಪ್ರಜಾ ಪ್ರಭುತ್ವದ ಕಗ್ಗೊಲೆಯಾಗಿದೆ. ಬಿಜೆಪಿಯವರ ಇಂತಹ ದಮನಕಾರಿ ನೀತಿಯನ್ನು ನಾವು ಖಂಡಿಸಬೇಕು, ವಿಶ್ವಾಸಮತ ಸಾಬೀತುಪಡಿಸಲು ಬಿಜೆಪಿಗೆ 15 ದಿನಗಳ ಕಾಲಾವಕಾಶ ನೀಡಿರುವುದು ಏಕೆ..? ಪ್ರತಿಭಟನೆಯಲ್ಲಿ ಎಲ್ಲರೂ ಕೈ ಜೋಡಿಸಿ ‘ ಎಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ವಿಧಾನಸೌಧದ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com