ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ : ಸಿದ್ದರಾಮಯ್ಯ, ಖರ್ಗೆ ಭಾಗಿ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪನವರು ಪ್ರಮಾಣ ವಚನ ಸ್ವೀಕರಿಸಿರುವ ಬೆನ್ನಲ್ಲೇ, ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್, ರಾಷ್ಟ್ರೀಯ ನಾಯಕ ಗುಲಾಂ ನಬಿ ಆಜಾದ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಕಾಂಗ್ರೆಸ್ ಮುಖಂಡರುಗಳಾದ ಎಚ್.ಕೆ ಪಾಟೀಲ್, ಮಲ್ಲಿಕಾರ್ಜುನ ಪಾಟೀಲ್, ಹ್ಯಾರಿಜ್, ಜಮೀರ್ ಅಹ್ಮದ್, ಆರ್.ವಿ ದೇಶಪಾಂಡೆ, ಕೆ.ಜೆ ಜಾರ್ಜ್, ರಮೇಶ್ ಜಾರಕಿಹೊಳೆ, ರಾಜೀವ್ ಗೌಡ, ಕೆಪಿಜೆಪಿ ಶಾಸಕ ಶಂಕರ್, ಅಶೋಕ್ ಗೆಹ್ಲೋಟ್ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕಪ್ಪು ಪಟ್ಟಿ ಧರಿಸಿ, ಗಾಂಧಿ ಟೋಪಿ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

‘ ಚುನಾವಣೆಯಲ್ಲಿ ಸರ್ಕಾರ ರಚಿಸಲು ಅಗತ್ಯವಿರುವಷ್ಟು ಸಂಖ್ಯೆಯ ಸ್ಥಾನಗಳಲ್ಲಿ ಗೆಲ್ಲದಿದ್ದರೂ ಬಿಜೆಪಿ ಸರ್ಕಾರ ರಚಿಸಿದ್ದು, ಶಾಸಕರ ಕುದುರೆ ವ್ಯಾಪಾರದ ಮೂಲಕ ವಿಶ್ವಾಸಮತ ವ್ಯಕ್ತಪಡಿಸುವ ಹುನ್ನಾರ ನಡೆಸಿದೆ, ಸಂವಿಧಾನ ವಿರೋಧಿ ನಡೆ ‘ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com