IPL : ಮುಂಬೈ ಇಂಡಿಯನ್ಸ್ ತಂಡಕ್ಕೆ 3 ರನ್ ರೋಚಕ ಜಯ : ರಾಹುಲ್ ಹೋರಾಟ ವ್ಯರ್ಥ

ಮುಂಬೈನ ವಾಂಖೇಡೆ ಮೈದಾನದಲ್ಲಿ ಬುಧವಾರ ನಡೆದ ಐಪಿಎಲ್ ಟಿ-20 ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 3 ರನ್ ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ.

ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರುಗಳಲ್ಲಿ 8 ವಿಕೆಟ್ ಕಳೆದುಕೊಂಡು 186 ರನ್ ಮೊತ್ತ ಕಲೆಹಾಕಿತು. ಮುಂಬೈ ಪರವಾಗಿ ಕೈರನ್ ಪೊಲ್ಲಾರ್ಡ್ 50, ಸೂರ್ಯಕುಮಾರ್ ಯಾದವ್ 27 ಹಾಗೂ ಇಶಾನ್ ಕಿಶನ್ 20 ರನ್ ಗಳಿಸಿದರು.

ಗುರಿಯನ್ನು ಬೆನ್ನತ್ತಿದ ಕಿಂಗ್ಸ್ ಇಲೆವನ್ ಪಂಜಾಬ್ 20 ಓವರ್ ಗಳ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಲಷ್ಟೇ ಶಕ್ತವಾಗಿ ಕೇವಲ 3 ರನ್ ಅಂತರದ ಸೋಲೊಪ್ಪಿಕೊಂಡಿತು. ಪಂಜಾಬ್ ಪರವಾಗಿ ಅರ್ಧಶತಕ ಬಾರಿಸಿದ ಆರಂಭಿಕ ಬ್ಯಾಟ್ಸಮನ್ ಕೆ.ಎಲ್ ರಾಹುಲ್ (94) ಹೋರಾಟ ವ್ಯರ್ಥವಾಯಿತು.

Leave a Reply

Your email address will not be published.