ಬಿಜೆಪಿಯವರಿಂದ ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕ, ಕಗ್ಗೊಲೆ : ರಾಹುಲ್ ಗಾಂಧಿ ವಾಗ್ದಾಳಿ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ  ಬಿ.ಎಸ್ ಯಡಿಯೂರಪ್ಪ ಬೆಳಿಗ್ಗೆ ಪ್ರಮಾಣ ವಚನ ಸ್ವೀಕರಿಸಿದುದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಛತ್ತೀಸಗಢದ ರಾಯಪುರದಲ್ಲಿ ಶುಕ್ರವಾರ ನಡೆದ ಸಮಾವೇಶವೊಂದರಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

‘ ಭಾರತೀಯ ಜನತಾ ಪಕ್ಷದವರಿಂದ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಯಾಗಿದೆ. ಪ್ರಜಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಲಾಗಿದೆ. ಇಡೀ ದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳೇ ಹೇಳುತ್ತಿದ್ದಾರೆ ‘ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಛತ್ತೀಸ್ ಗಢದ ರಾಯ್ ಪುರದಲ್ಲಿ ಕಿಡಿ ಕಾರಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com