ಹಾಸನ : ದೇವೇಗೌಡರ ಜನ್ಮದಿನ ಪ್ರಯುಕ್ತ ಅಭಿಮಾನಿಗಳಿಂದ ದೇವಸ್ಥಾನದಲ್ಲಿ ಪೂಜೆ

ಹಾಸನ : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹಿರಿಯ ಮುತ್ಸದ್ದಿ ದೇವೇಗೌಡರ ಜನ್ಮದಿನದ ಆಚರಣೆಯ ಹಾಸನದ ಪ್ರಯುಕ್ತ ನೀಲಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ನಗರದ ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದ್ದಾರೆ.

ನಂತರ ಹಾಸನದ ಜಿಲ್ಲಾಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ಹಂಚಿದ್ದಾರೆ. ಈ ಎರಡೂ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹೆಚ್.ಎಸ್ ಪ್ರಕಾಶ್, ಜೆಡಿಎಸ್ ವಕ್ತಾರ ಹೊಂಗೆರೆ ರಘು ಮತ್ತು ನೂರಾರು ಜೆಡಿಎಸ್ ನ ಕಾರ್ಯಕರ್ತರು ಭಾಗಿಯಾಗಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com