ಬಿಜೆಪಿಗೆ ಮುಖಭಂಗ : ಬಹುಮತ ಸಿಗುವ ವಿಶ್ವಾಸವಿಲ್ಲದ ಯಡಿಯೂರಪ್ಪ ರಾಜೀನಾಮೆ

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯ ವೇಳೆ ಬಹುಮತ ಸಾಬೀತು ಪಡಿಸುವಲ್ಲಿ ಬಿ.ಎಸ್ ಯಡಿಯೂರಪ್ಪ ವಿಫಲರಾಗಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಶಾಸಕರಿಂದ ವಿಶ್ವಾಸಮತವನ್ನೂ ಕೂಡ ಯಾಚಿಸದೇ ನೇರವಾಗಿ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಶನಿವಾರ ಸಾಯಂಕಾಲ 4 ಗಂಟೆಗೆ ಸದನದಲ್ಲಿ ಬಹುಮತ ಸಾಬೀತು ಪಡಿಸುವಂತೆ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿತ್ತು.

ರಾಜ್ಯದ ಒಟ್ಟು 222 ಸ್ಥಾನಗಳ ಪೈಕಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 104 ಸೀಟ್ ಗಳಲ್ಲಿ ಜಯ ಗಳಿಸಿತ್ತು. ಕಾಂಗ್ರೆಸ್ 78 ಹಾಗೂ ಜೆಡಿಎಸ್ 38 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Leave a Reply

Your email address will not be published.

Social Media Auto Publish Powered By : XYZScripts.com