ಕುಮಾರಸ್ವಾಮಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಿದ ರಾಜ್ಯಪಾಲ ವಾಲಾ …

ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಸರಕಾರ ರಚಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಆಹ್ವಾನ ನೀಡಿದ್ದಾರೆ. ತಮಗೆ 117 ಶಾಸಕರ ಬೆಂಬಲ ಇದೆ. ಸರಕಾರ ರಚಿಸಲು ಅವಕಾಶ ನೀಡಿ ಎಂದು ಎಚ್.ಡಿ. ಕುಮಾರಸ್ವಾಮಿ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದರು. ಸರ್ಕಾರ ರಚನೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿದ ರಾಜ್ಯಪಾಲ ವಾಲಾ ಆದರೆ ಈ ಹಿಂದೆ ರಾಜ್ಯಪಾಲರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರನ್ನು ಸರಕಾರ ರಚನೆಗೆ ಆಹ್ವಾನಿಸಿದ್ದರು. ಬಿ.ಎಸ್. ಯಡಿಯೂರಪ್ಪಬಹುಮತ ಸಾಬಿತುಪಡಿಸುವಲ್ಲಿ ವಿಫಲರಾಗಿದ್ದರು.   ಇದೀಗ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಸರಕಾರ ರಚನೆಗೆ ಆಹ್ವಾನ ನೀಡಿದ್ದಾರೆ

ಮೈತ್ರಿಕೂಟದಿಂದ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಆದರೆ ಪ್ರಮಾಣ ವಚನಕ್ಕೆ ಇನ್ನೂ ಸಮಯ ನಿಗದಿಯಾಗಿಲ್ಲ. ಸಂಭಾವ್ಯ ರಾಜ್ಯಪಾಲರ ಭೇಟಿ ರಾಜ್ಯಪಾಲರನ್ನು ಎಚ್.ಡಿ. ಕುಮಾರಸ್ವಾಮಿ ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಪ್ರಮಾಣ ವಚನಕ್ಕೆ ದಿನ ಮತ್ತು ಸಮಯ ನಿಗದಿ ಪಡಿಸುವ ಸಾಧ್ಯತೆ ಇದೆ. ವರದಿಗಳ ಪ್ರಕಾರ ಸೋಮವಾರ ಮಧ್ಯಾಹ್ನ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

Leave a Reply

Your email address will not be published.

Social Media Auto Publish Powered By : XYZScripts.com