ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ….

ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಇನ್ನೂ ಒಂದು ವಾರ ಕಾಲ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎ.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.


ಈಗಾಗಲೇ ಉಂಟಾಗಿದ್ದ ಸಾಗರ್ ಹೆಸರಿನ ಚಂಡಮಾರುತ ಪರಿಣಾಮ ರಾಜ್ಯದ ಮೇಲಾಗಿಲ್ಲ. ಅದು ಅರಬ್ ರಾಷ್ಟ್ರಗಳ ಕಡೆಗೆ ಹೋಗಿದೆ. ಆದರೆ ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಅದು ಮುಂದೆ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಲಾಗುತ್ತಿದೆ ಎಂದರು.

ಮೇ 25ರವರೆಗೂ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಒಂದಲ್ಲ ಒಂದು ಕಡೆ ನಿತ್ಯ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಮುನ್ಸೂಚನೆಗಳಿವೆ.


ಕಳೆದ ಎರಡು ವಾರಗಳಿಂದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಉತ್ತಮವಾದ ಮಳೆಯಾಗಿದೆ. ಈ ಬಾರಿಯ ನೈರುತ್ಯ ಮುಂಗಾರು ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ರಾಜ್ಯ ಪ್ರವೇಶ ಮಾಡುವ ಮುನ್ಸೂಚನೆ ಇದೆ ಎಂದು ಹೇಳಿದರು.

18 thoughts on “ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ….

Leave a Reply

Your email address will not be published.

Social Media Auto Publish Powered By : XYZScripts.com