ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತು ಪಡಿಸುತ್ತೇನೆ : HDK

ಬೆಂಗಳೂರು, ಮೇ 20, : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾಳೆ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಾಗೂ ಮಂತ್ರಿಮಂಡಲ ಕುರಿತು ಚರ್ಚೆ ನಡೆಸಲಿದ್ದೇನೆ. ಅವರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಿದ್ದೇನೆ ಎಂದು ಹೇಳಿದರು.

ಇಂದು ಬೆಳಿಗ್ಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ಹೊರಬಂದ ನಂತರ ಇಂದು ತಮಿಳುನಾಡಿನ ತಿರುಚ್ಚಿಯ ಶ್ರೀರಂಗಂ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ನಾಳೆ ಬೆಳಗ್ಗೆ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದೇನೆ ಹೆಚ್ ಡಿಕೆ ತಿಳಿಸಿದರು

Leave a Reply

Your email address will not be published.

Social Media Auto Publish Powered By : XYZScripts.com