ವಿವಿ ಪ್ಯಾಟ್ ಪ್ರಕರಣ : BJP ಅಭ್ಯರ್ಥಿ ವಿಜುಗೌಡ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ

ವಿಜಯಪುರ‌ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಬಳಿ ನಿನ್ನೆ ಮಧ್ಯಾಹ್ನದ ನಂತರ ವಿವಿ ಪ್ಯಾಟ್ ಯಂತ್ರಗಳು ಪತ್ತೆಯಾದ ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಬಬಲೇಶ್ವರ ಕ್ಷೇತ್ರದ ಪರಾಜಿತ‌ ಬಿಜೆಪಿ ಅಭ್ಯರ್ಥಿ ವಿಜಯಕುಮಾರ ಪಾಟೀಲ್ ನೇತೃತ್ವದಲ್ಲಿ ಬಬಲೇಶ್ವರ ನಾಕಾ ಬಳಿಯ ನಿವಾಸದಿಂದ ಡಿಸಿ ಕಚೇರಿವರೆಗೂ ಪ್ರತಿಭಟನೆ ನಡೆಸಲಾಗಿದೆ, ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು, ವಿವಿ ಪ್ಯಾಟ್ ಮಶೀನ್ಸ್ ಬಬಲೇಶ್ವರ ಕ್ಷೇತ್ರಕ್ಕೆ ಸೇರಿವೆ ಎಂದು‌ ಆರೋಪಿಸಿದ್ದಾರೆ.

ಘಟನೆಯನ್ನು ‌ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರತಿಭಟನಾಕಾರರು ‌ಒತ್ತಾಯಿಸಲಾಗಿದ್ದು, ಜಿಲ್ಲಾಡಳಿತ ಹಾಗೂ ಚುನಾವಣಾಧಿಕಾರಿಗಳ ‌ವಿರುದ್ದ ಘೋಷಣೆ ಕೂಗಿದ್ದಾರೆ. ನ್ಯಾಯ ನೀಡಬೇಕೆಂದು ಒತ್ತಾಯ ಹೇರಿದ್ದಾರೆ. ಡಿಸಿ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣವಿತ್ತು.

Leave a Reply

Your email address will not be published.

Social Media Auto Publish Powered By : XYZScripts.com