ಕುಮಾರಪರ್ವಕ್ಕೆ ದಿನಗಣನೆ : HDK ಪ್ರಮಾಣ ವಚನಕ್ಕೆ ಭರದ ಸಿದ್ಧತೆ : 1 ಲಕ್ಷ ಆಸನ ವ್ಯವಸ್ಥೆ..

ಬುಧವಾರ ರಾಜ್ಯದ ನೂತನ ಸಿಎಂ ಆಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕಾಗಿ ವಿಧಾನಸೌಧದ ಮುಂಭಾಗದಲ್ಲಿ ಭರದ ಸಿದ್ದತೆ ನಡೆಯುತ್ತಿದೆ. ವಿಧಾನಸೌಧದ ಬಹು ಮೆಟ್ಟಿಲುಗಳ ಮೇಲೆ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ವೇದಿಕೆ ನಿರ್ಮಾಣದಲ್ಲಿ ಸಿಬ್ಬಂಧಿಗಳು ತೊಡಗಿದ್ದಾರೆ.

ವಿವಿಐಪಿಗಳಿಗಾಗಿಯೇ 3000 ವಿಶೇಷ ಆಸನಗಳ ವ್ಯವಸ್ಥೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗಾಗಿ ಹೈಕೋರ್ಟ್ ಹಾಗೂ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ 1ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಪ್ರಮಾಣ ವಚನ ಸ್ವೀಕಾರಕ್ಕಾಗಿ ನಿರ್ಮಿಸಲಾಗುತ್ತಿರುವ ಬೃಹತ್ ಮಂಟಪ‌ಕ್ಕೂ ವಿಶೇಷ ಪೂಜೆ ಸಲ್ಲಿಸಲಾಯಿತು ಅನಂತ್ ಶಾಸ್ತ್ರಿ ಅವರಿಂದ ವಿಧಾನಸೌಧದ ಬಹುಮೆಟ್ಡಿಲುಗಳ ಮೇಲೆ ವಿಶೇಷ ಪೂಜೆ ಸಲ್ಲಿಸಲಾಯಿತು.

Leave a Reply

Your email address will not be published.

Social Media Auto Publish Powered By : XYZScripts.com