ಕುಮಾರಪರ್ವಕ್ಕೆ ಮುಹೂರ್ತ ನಿಗದಿ : ಬುಧವಾರ ಸಂಜೆ 4.30ಕ್ಕೆ HDK ಪ್ರಮಾಣ ವಚನ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎಚ್.ಡಿ ಕುಮಾರಸ್ವಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕುಮಾರಪರ್ವಕ್ಕೆ ಮುಹೂರ್ತ ನಿಗದಿಯಾಗಿದ್ದು, ಬುಧವಾರ ಸಾಯಂಕಾಲ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಸಮಾರಂಭಕ್ಕೆ ಪೂರ್ವ ಸಿದ್ಧತೆ ಭರದಿಂದ ಸಾಗಿದೆ.

ವಿಧಾನಸೌಧದ ಬಹು ಮೆಟ್ಟಿಲುಗಳ ಮೇಲೆ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ವೇದಿಕೆ ನಿರ್ಮಾಣದಲ್ಲಿ ಸಿಬ್ಬಂಧಿಗಳು ತೊಡಗಿದ್ದಾರೆ. ವಿವಿಐಪಿಗಳಿಗಾಗಿಯೇ 3000 ವಿಶೇಷ ಆಸನಗಳ ವ್ಯವಸ್ಥೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗಾಗಿ ಹೈಕೋರ್ಟ್ ಹಾಗೂ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ 1ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಪ್ರಮಾಣ ವಚನ ಸ್ವೀಕಾರಕ್ಕಾಗಿ ನಿರ್ಮಿಸಲಾಗುತ್ತಿರುವ ಬೃಹತ್ ಮಂಟಪ‌ಕ್ಕೂ ವಿಶೇಷ ಪೂಜೆ ಸಲ್ಲಿಸಲಾಯಿತು ಅನಂತ್ ಶಾಸ್ತ್ರಿ ಅವರಿಂದ ವಿಧಾನಸೌಧದ ಬಹುಮೆಟ್ಡಿಲುಗಳ ಮೇಲೆ ವಿಶೇಷ ಪೂಜೆ ಸಲ್ಲಿಸಲಾಯಿತು.

Leave a Reply

Your email address will not be published.

Social Media Auto Publish Powered By : XYZScripts.com