ನವದೆಹಲಿ : ಇಂದು ಸೋನಿಯಾ-ರಾಹುಲ್ ಅವರೊಂದಿಗೆ HDK ಮಹತ್ವದ ಭೇಟಿ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಸೋಮವಾರ ಸಾಯಂಕಾಲ 4 ಗಂಟೆಗೆ ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಕೆಲವು ಮಹತ್ವದ ವಿಷಯಗಳ ಕುರಿತು, ಸೋನಿಯಾ ಹಾಗೂ ರಾಹುಲ್ ಅವರೊಂದಿಗೆ HDK ಚರ್ಚೆ ನಡೆಸಲಿದ್ದಾರೆ.

ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬುದು ಈಗಾಗಲೇ ನಿರ್ಣಯಗೊಂಡಿದೆ. ಆದರೆ, ರಾಜ್ಯದ ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದರ ಕುರಿತು ಭೇಟಿಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ವತಿಯಿಂದ ಜಿ. ಪರಮೇಶ್ವರ್ ಅವರ ಹೆಸರು ಮುಂಚೂಣಿಯಲ್ಲಿದೆ.

ನೂತನ ಸಮ್ಮಿಶ್ರ ಸರ್ಕಾರದಲ್ಲಿ 34 ಮಂತ್ರಿಗಳಿರಲಿದ್ದು, ಅವುಗಳಲ್ಲಿ 20 ಸಚಿವ ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಜೆಡಿಎಸ್ ಪಕ್ಷಕ್ಕೆ 14 ಸಚಿವ ಸ್ಥಾನಗಳು ಸಿಗಬಹುದೆಂದು ಅಂದಾಜಿಸಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com