ರೈತರ ಸಾಲಮನ್ನಾ: ಉಲ್ಟಾ ಹೊಡೆದ HDK….. ದೇವರ ಮೊರೆ ಹೋದ ಕುಮಾರಸ್ವಾಮಿ !

ಚಿಕ್ಕಮಗಳೂರು : ನಿಯೋಜಿತ ಸಿಎಂ ಎಚ್‌.ಡಿ ಕುಮಾರಸ್ವಾಮಿ ಇಂದು ಶೃಂಗೇರಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯ ಮಂತ್ರಿ ಸ್ಥಾನವನ್ನು ಅಷ್ಟು ಸುಲಭವಾಗಿ ನಿಭಾಯಿಸಲು ಸಾಧ್ಯವಿಲ್ಲ ಎಂಬುದು ನನಗೆ ಗೊತ್ತಿದೆ ಎಂದಿದ್ದಾರೆ.

ನನ್ನ ಜೀವನದಲ್ಲಿ ಇದೊಂದು ದೊಡ್ಡ ಸವಾಲು. ಜನತೆಯಲ್ಲಿಯೂ ಯಾರು ರಾಜ್ಯ ಆಳುತ್ತಾರೆ ಎಂಬ ಅನುಮಾನ ಇದೆ. ಎಲ್ಲದಕ್ಕೂ ತಾಯಿ ಶಾರದಾಂಬೆಯ ಆರ್ಶಿವಾದವಿದೆ. ಆದ್ದರಿಂದ ಎಲ್ಲವೂ ಸುಗಮವಾಗಿ ಆಗುತ್ತದೆ ಎಂಬ ನಂಬಿಕೆ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಸ್ಥಾನಕ್ಕೆ ಪೈಪೋಟಿ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಈ ಬಗ್ಗೆ ಸಂಜೆ ಚರ್ಚೆ ನಡೆಸಿ ತೀರ್ಮಾನ ತಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಇನ್ನು ಸಾಲಮನ್ನಾ ಕುರಿತು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದಲ್ಲಿ ಸಾಲಮನ್ನಾ ಮಾಡುವುದು ಕಷ್ಟ. ಪೂರ್ಣಬಹುಮತ ಬಂದರೆ ಸಾಲಮನ್ನಾ ಮಾಡುವುದಾಗಿ ಹೇಳಿದ್ದೆ. ಆದರೆ ರಾಜ್ಯದ ಜನತೆ ಸಂಪೂರ್ಣ ಬಹುಮತ ಕೊಟ್ಟಿಲ್ಲ. ಆದರೆ ರೈತರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತರುತ್ತೇನೆ. ದೇವರ ಅನುಗ್ರಹವಿದ್ದರೆ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com