ರೈತರಿಗೆ ಎದುರಾಯ್ತು ಮೊದಲ ಆಘಾತ : ಸಮ್ಮಿಶ್ರ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಕಷ್ಟ ಎಂದ JDS ನಾಯಕ !

ಮಂಡ್ಯ : ರೈತರ ಸಾಲಮನ್ನಾ ವಿಚಾರವಾಗಿ ಮೇಲುಕೋಟೆ ಶಾಸಕ ಆಘಾತಕಾರಿ ಮಾಹಿತಿಯನ್ನು ಹೊರಹಾಕಿದ್ದಾರೆ. ಇಷ್ಟು ದಿನ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ, ರೈತರ ಸಾಲಮನ್ನಾ ಮಾಡುತ್ತಾರೆ ಎಂದು ಕಾದು ಕುಳಿತಿದ್ದ ರೈತರಿಗೆ ಮೊದಲ ಆಘಾತ ಎದುರಾಗಿದೆ.

ಸಮ್ಮಿಶ್ರ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಮಾಡುವುದು ಕಷ್ಟ ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಮಂಡ್ಯದಲ್ಲಿ ಹೇಳಿಕೆ ನೀಡಿದ್ದಾರೆ.  ಸಮ್ಮಿಶ್ರ ಸರ್ಕಾರದಲ್ಲಿ ಸಾಲ ಮನ್ನಾ ಕಷ್ಟ. ಆದರೂ ಸಾಲ ಮನ್ನಾದಿಂದ ಹಿಂದೆ ಸರಿಯಲ್ಲ. ಕಾಂಗ್ರೆಸ್ಸಿಗರನ್ನು ಕೇಳಿ ಸಾಲ ಮನ್ನಾ ಮಾಡಲಾಗುವುದು. ಈ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.
ಮ್ಯಾಜಿಕ್ ನಂಬರ್ ಬಂದಿದ್ದರೆ 24 ಗಂಟೆಯಲ್ಲೇ ಸಾಲ ಮನ್ನಾ ಆಗುತ್ತಿತ್ತು.  ನಿನ್ನೆ ಕುಮಾರಸ್ವಾಮಿ ಜೊತೆ ತೆರಳಿ ರಾಜೀನಾಮೆ ಸಲ್ಲಿಸಿ ಬಂದಿದ್ದೇನೆ. ಪಕ್ಷಾತೀತವಾಗಿ ಜೆಡಿಎಸ್ ಪಕ್ಷಕ್ಕೆ ಮಂಡ್ಯದ ಜನ ಆಶೀರ್ವಾದ ಮಾಡಿದ್ದಾರೆ. ನಾಳೆ ನಡೆಯೋ ಪ್ರಮಾಣವಚನ ಕಾರ್ಯಕ್ರಮಕ್ಕೆ ನಮ್ಮ ಜಿಲ್ಲೆಯ ಹೆಚ್ಚಿನ ಜನ ಬನ್ನಿ ಎಂದು ಆಹ್ವಾನ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com